Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 31 ವೀಕ್ಷಣೆಗಳು
sharnu prakash patil

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ಬರುತ್ತಿರುವ ದೂರುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರ “ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲಾಗುವುದು ಎಂದು ಅವರು ಹೇಳಿದರು.

ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು .

ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು 35,000 ಸೀಟ್‌ ಗಳು ಲಭ್ಯವಿವೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನೀಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ಅವರು ತಿರಸ್ಕರಿಸಿದರು.

ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾ ವಹಿಸಲಿದೆ. ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೋಶಿನ್‌ ಅವರಿಗೆ ಸೂಚನೆ ನೀಡಿದರು.

ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿ ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಸೂಚನೆ ನೀಡಿದರು.

ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿಯನ್ನ ಹಿಂದಕ್ಕೆ ಪಡೆಯಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಒಂದು ಕಟ್ಟಡ ಒಂದು ಸಂಸ್ಥೆ ನಿಯಮ:

ನರ್ಸಿಂಗ್‌ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್‌ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ರಾಜೀವ್‌ ಗಾಂಧಿ ಯೂನಿರ್ಸಿಟಿ ಆಫ್‌ ಹೆಲ್ತ್ ಸೈನ್ಸನ್ ಉಪ-ಕುಲಪತಿ ಡಾ ರಮೇಶ್‌, ರಿಜಿಸ್ಟ್ರಾರ್‌ ಪಿ.ಆರ್‌ ಶಿವಪ್ರಸಾದ್‌, ಜಂಟಿ ಕಾರ್ಯದರ್ಶಿವೆಂಕಟೇಶ್‌ ಮೂರ್ತಿ ಪಾಲ್ಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment