Home ತಾಜಾ ಸುದ್ದಿ ಜೂನ್ 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

ಜೂನ್ 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

by Editor
0 comments

187 ಕೋಟಿ ರೂ. ಹಗರಣ ನಡೆದಿರುವ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶರಣಪ್ರಕಾಶ್ ಪಾಟೀಲ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ; ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.

ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಟೀಕಿಸಿದರು.

ಎಸ್‍ಐಟಿ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಅಲ್ಲಿ ಇಲ್ಲಿ ಅಧಿಕಾರಿ ಮನೆಯಲ್ಲಿ ಒಂದಷ್ಟು ಹಣ ಲಭಿಸಿದೆ ಎನ್ನುವ ಮೂಲಕ ಕಣ್ಣೊರೆಸುವ ತಂತ್ರವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ದೂರಿದರು. ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ತೆಲಂಗಾಣಕ್ಕೆ ಬೇನಾಮಿ ಖಾತೆಗೆ ಹಣ ವರ್ಗಾವಣೆ ಮಾಡಿ ವಿತ್‍ಡ್ರಾ ಮಾಡಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಆರೋಪಿಸಿದರು.

banner

ಹಿಂದೆಯೂ ಕಾಂಗ್ರೆಸ್ ಸರಕಾರ ಇದ್ದಾಗ ಇಂಥ ಅನೇಕ ಹಗರಣಗಳನ್ನು ಅವರದೇ ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಆರೋಪಿಸಿದರು. ಹೋರಾಟವನ್ನು ಇಲ್ಲಿಗೇ ಕೈಬಿಡುವುದಿಲ್ಲ ಎಂದ ಅವರು, ಪೆಟ್ರೋಲ್- ಡೀಸೆಲ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಸಿದ್ದರಿಂದ ರಾಜ್ಯದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ಜನರಿಗೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲಾಗಿದೆ. ವಿದ್ಯುತ್ ದರ ಏರಿಸಿದ್ದಾರೆ. ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಇದ್ದುದನ್ನು 2.5 ಲಕ್ಷಕ್ಕೆ ಏರಿಸಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಜನರ ಕಿವಿಗೆ ಹೂ ಮುಡಿಸಿದ್ದಾರೆ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ನಾಡಿನ ಜನತೆಗೆ ದ್ರೋಹ ಬಗೆಯುತ್ತಿದೆ. ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಸಾಮಾನ್ಯ ಜನರೂ ಮಾತನಾಡುತ್ತಿದ್ದಾರೆ ಎಂದರು.

ರಾಜ್ಯದ ರೈತರು ಬರದಿಂದ ನರಳಿ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಟ್ರ್ಯಾಕ್ಟರ್- ಟಿಲ್ಲರ್ ಬಳಸುವ ರೈತರೂ ತೊಂದರೆ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜದ ದರ ಶೇ 40- 50ರಷ್ಟು ಹೆಚ್ಚಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರ ಯಾಕೆ ಇಷ್ಟು ಕಟುವಾಗಿ ನಡೆದುಕೊಳ್ಳುತ್ತಿದೆ ಎಂದು ಪ್ರಶ್ನಿಸಿದರು. ಜನವಿರೋಧಿ ತೀರ್ಮಾನಗಳೇಕೆ ಎಂದು ಕೇಳಿದರು.

ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಅನಿಸುತ್ತಿದೆ ಎಂದು ಅವರು ತಿಳಿಸಿದರು. ಹಾಲಿನ ದರದ ಬಳಿಕ ಬಸ್ ಪ್ರಯಾಣದರವೂ ದುಬಾರಿ ಆಗಲಿದೆ ಎಂದು ಅವರು ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿವೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ವಿಶ್ಲೇಷಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು!