Friday, October 18, 2024
Google search engine
Homeತಾಜಾ ಸುದ್ದಿಒಂದು ದೇಶ, ಒಂದು ಚುನಾವಣೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ: ಅಧಿವೇಶನದಲ್ಲಿ ಮಂಡನೆ

ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ: ಅಧಿವೇಶನದಲ್ಲಿ ಮಂಡನೆ

ಒಂದು ದೇಶ, ಒಂದು ದೇಶ ನಡೆಸುವ ಮೂಲಕ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಏಕಕಾಲದಲ್ಲಿ ನಡೆಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾನೂನಿನಲ್ಲಿ ತಿದ್ದುಪಡಿ ತರುವ ಮೂಲಕ ದೇಶದಲ್ಲಿ ಒಂದೇ ಬಾರಿಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ, ನೀಟ್ ಪರೀಕ್ಷೆ ವಿರೋಧಿಸಿ ಹಾಗೂ ಬಿಬಿಎಂಪಿಯನ್ನು 5 ವಿಭಾಗಗಳಾಗಿ ವಿಭಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರುವ ವಿಧೇಯಕಗಳನ್ನು ಜಾರಿಗೆ ತರುವ ಕುರಿತು ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಒಂದು ದೇಶ ಒಂದು ಚುನಾವಣೆ ನಡೆಸುವುದು ಸಂವಿಧಾನ ವಿರೋಧಿಯಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ನಮ್ಮ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಸುವುದು ಸಡೆಸುವುದು ಸರಿಯಲ್ಲ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments