Saturday, July 6, 2024
Google search engine
Homeಕ್ರೀಡೆಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ದಾಖಲೆ ಬರೆದ ಪ್ಯಾಟ್ ಕಮಿನ್ಸ್!

ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ದಾಖಲೆ ಬರೆದ ಪ್ಯಾಟ್ ಕಮಿನ್ಸ್!

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಬ್ರೆಟ್ ಲೀ ನಂತರ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಸಾಧಿಸಿದ ಆಸ್ಟ್ರೇಲಿಯಾದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಕ್ರವಾರ ನಡೆದ ಟಿ-20 ವಿಶ್ವಕಪ್ ನ ಸೂಪರ್-8 ಪಂದ್ಯದಲ್ಲಿ ಕಮಿನ್ಸ್ ಮೊಹಮದುಲ್ಲಾ, ಮೆಹದಿ ಹಸನ್ ಮತ್ತು ಟೌಹಿದ್ ಅವರ ವಿಕೆಟ್ ಗಳನ್ನು ಪಡೆಯುವ ಮೂಲಕ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎಂಬ ಮತ್ತೊಂದು ದಾಖಲೆಗೆ ಪಾತ್ರರಾದರು.

ಒಟ್ಟಾರೆಯಾಗಿ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಸಾಧಿಸಿದ ವಿಶ್ವದ 7ನೇ ಬೌಲರ್ ಎಂಬ ಗೌರವಕ್ಕೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ. ಅಲ್ಲದೇ ಬ್ರೆಟ್ ಲೀ, ಅಸ್ಟನ್ ಆಗರ್, ನಾಥನ್ ಎಲಿಸ್ ನಂತರದ ನಾಲ್ಕನೇ ಬೌಲರ್ ಆಗಿದ್ದಾರೆ.

ಪ್ಯಾಟ್ ಕಮಿನ್ಸ್ 2 ಓವರ್ ಗಳಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದು, 18ನೇ ಓವರ್ ನ ಕೊನೆಯ ಎರಡು ಎಸೆತದಲ್ಲಿ ಮೊಹಮದುಲ್ಲಾ ಮತ್ತು ಮೆಹದಿ ಹಸನ್ ಅವರ ವಿಕೆಟ್ ಪಡೆದಿದ್ದ ಕಮಿನ್ಸ್, 20 ಓವರ್ ನ ಮೊದಲ ಎಸೆತದಲ್ಲಿ ಟೌಹಿದ್ ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು.

ಆಸ್ಟ್ರೇಲಿಯಾದ ಮಾರಕ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ 8 ವಿಕೆಟ್ ಗೆ 140 ರನ್ ಗಳಿಸಿದರೆ, ಆಸ್ಟ್ರೇಲಿಯಾ 100 ರನ್ ಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಸುರಿದಿದ್ದರಿಂದ ಡಕ್ ವರ್ತ್ ಲೂಯಿಸ್ ನಿಯಮದ ಅನ್ವಯ ಆಸ್ಟ್ರೇಲಿಯಾ 28 ರನ್ ಗಳಿಂದ ಜಯಭೇರಿ ಬಾರಿಸಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments