Kannadavahini

ಬಾರಿಸು ಕನ್ನಡ ಡಿಂಡಿಮವ

dayanand
ಅಪರಾಧ ತಾಜಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ: ಪೊಲೀಸ್ ಆಯುಕ್ತ ದಯಾನಂದ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ್ ದಯಾನಂದ್,‌ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಮೃತರ ಕುಟುಂಬಕ್ಕೆ ನಾವು ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುವುದು ಎಂದರು.

ಪೊಲೀಸರ ಸಮಯ ಪ್ರಜ್ಞೆಯಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಬೇರೆ ಬೇರೆ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

LEAVE A RESPONSE

Your email address will not be published. Required fields are marked *