Kannadavahini

ಬಾರಿಸು ಕನ್ನಡ ಡಿಂಡಿಮವ

prajwal revanna
ಅಪರಾಧ ತಾಜಾ ಸುದ್ದಿ ಬೆಂಗಳೂರು

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ಎಸ್ ಐಟಿ ಪೊಲೀಸರ ವಶಕ್ಕೆ ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ನಿರಾಕರಿಸಲಾಗಿದೆ. ಇದರಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯಬೇಕಾಗಿದೆ.

ಲೋಕಸಭಾ ಚುನಾವಣೆಗೂ ಮುನ್ನ ಹೊರಬಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಮೇ 30ರಂದು ರಾತ್ರಿ ಸ್ವದೇಶಕ್ಕೆ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದರು.

LEAVE A RESPONSE

Your email address will not be published. Required fields are marked *