Monday, September 16, 2024
Google search engine
Homeತಾಜಾ ಸುದ್ದಿಗುಜರಾತ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ: ಕ್ರೀಡಾ ವಲಯದ ಮುಖ್ಯಸ್ಥ ಸೇರಿ ಮೂವರು...

ಗುಜರಾತ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ: ಕ್ರೀಡಾ ವಲಯದ ಮುಖ್ಯಸ್ಥ ಸೇರಿ ಮೂವರು ಅರೆಸ್ಟ್

ಕ್ರೀಡಾ ವಲಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 24 ಮಂದಿ ಮೃತಪಟ್ಟ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿ ಶನಿವಾರ ಸಂಭವಿಸಿದೆ.

ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಕ್ರೀಡಾ ವಲಯದಲ್ಲಿ ಈ ದುರಂತ ಸಂಭವಿಸಿದ್ದು, ನಿರ್ಲಕ್ಷ್ಯದ ಕಾರಣ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಗುಜರಾತ್ ಸರ್ಕಾರ ತನಿಖೆಗೆ ಆದೇಶಿಸಿದೆ. ಕ್ರೀಡಾ ವಲಯದ ಮುಖ್ಯಸ್ಥ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದುರಂತಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ತನಿಖೆಗೆ ಆದೇಶಿಸಲಾಗಿದೆ. ಘಟನಾ ಸ್ಥಳದಿಂದ ಇದುವರೆಗೆ 20 ಶವಗಳನ್ನು ಹೊರತೆ ತೆಗೆಯಲಾಗಿದ್ದು, ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಭುಪೇಂದ್ರ ಪಾಟೀಲ್ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಆದೇಶಿಸಿದ್ದು, ತನಿಖೆಗೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments