Thursday, September 19, 2024
Google search engine
Homeತಾಜಾ ಸುದ್ದಿಮೋದಿ ಪ್ರಮಾಣವಚನ ಸಮಾರಂಭಕ್ಕೆ 4 ದೇಶಗಳ ಪ್ರಧಾನಿ ಭಾಗಿ!

ಮೋದಿ ಪ್ರಮಾಣವಚನ ಸಮಾರಂಭಕ್ಕೆ 4 ದೇಶಗಳ ಪ್ರಧಾನಿ ಭಾಗಿ!

ಸತತ 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೆರೆಹೊರೆಯ ದೇಶಗಳ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿಯಾಗಿ ಶನಿವಾರ ಸಂಜೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ,  ನೇಪಾಳ ಪ್ರಧಾನಿ ಪುಷ್ಪ ಕಮಲ್ ದಾಸ್ ಮತ್ತು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗೇಲ್ ಪಾಲ್ಗೊಳ್ಳಲಿದ್ದಾರೆ.

2019ರಲ್ಲಿ 2ನೇ ಬಾರಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರದ ವೇಳೆ 8000 ಅಧಿಕ ಅತೀ ಗಣ್ಯರು ಉಪಸ್ಥಿತರಿದ್ದರು. ಈ ಬಾರಿ ನಾಲ್ಕು ದೇಶದ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ. ಆದರೆ ಪ್ರಬಲ ದೇಶಗಳಾದ ಚೀನಾ ಮತ್ತು ಪಾಕಿಸ್ತಾನವನ್ನು ಆಹ್ವಾನಿಸಲಾಗಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ಬಹುಮತ ಪಡೆಯಲು ಇದೇ ಮೊದಲ ಬಾರಿ ವಿಫಲವಾಗಿದೆ. ಬಹುಮತಕ್ಕೆ 272 ಸ್ಥಾನಗಳ ಅವಶ್ಯಕತೆ ಇದ್ದು, ಬಿಜೆಪಿ 240 ಸ್ಥಾನಗಳಲ್ಲಿ ಗೆದ್ದಿದೆ. ಆದರೆ ಎನ್ ಡಿಎ ಮಿತ್ರಪಕ್ಷಗಳಾದ ತೆಲುಗುದೇಶಂ ಮತ್ತು ಜೆಡಿಯು ಬೆಂಬಲ ಸೇರಿ 293 ಸ್ಥಾನಗಳ ಬಹುಮತ ಪಡೆಯುವ ಮೂಲಕ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments