Thursday, September 19, 2024
Google search engine
Homeಜಿಲ್ಲಾ ಸುದ್ದಿಖಾಲಿ ಇರುವ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿಗೆ ಕ್ರಮ: ಪ್ರಿಯಾಂಕ್ ಖರ್ಗೆ

ಖಾಲಿ ಇರುವ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿಗೆ ಕ್ರಮ: ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುಗರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದು ಅವರು ನುಡಿದರು.

ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮೈಕ್ರೊ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments