ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಕರಿಯಾ ಎಂದು ಕರೆದ ಜಮೀರ್ ಅಹ್ಮದ್ ಗೆ ಪುನೀತ್ ಕೆರೆಹಳ್ಳಿ ಫೇಸ್ ಬುಕ್ ಲೈವ್ ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದೂ ಅಲ್ಲದೇ ಜೀವ ಬೆದರಿಕೆ ಒಡ್ಡಿದ್ದರು.
ಈ ಬಗ್ಗೆ ಜಮೀರ್ ಅಹ್ಮದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶರು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.