Friday, May 17, 2024
Google search engine
Homeತಾಜಾ ಸುದ್ದಿತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಫ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ!

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಫ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ  ಚುನಾವಣಾಧಿಕಾರಿಗಳು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಪಾಸಣೆ ನಡೆಸಿದ್ದಾರೆ.

ರಾಹುಲ್ ಗಾಂಧಿ ತಾವು ಸ್ಪರ್ಧಿಸುತ್ತಿರುವ ಕೇರಳದ ವಯನಾಡು ಕ್ಷೇತ್ರಕ್ಕೆ ಭೇಟಿ ನೀಡಲು ತಮಿಳುನಾಡಿನಲ್ಲಿ ಇಳಿದಾಗ ಚುನಾವಣಾ ಅಧಿಕಾರಿಗಳು ಹೆಲಿಕಾಫ್ಟರ್ ಅನ್ನು ತಪಾಸಣೆ ಮಾಡಿದ್ದಾರೆ.

ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ ಸೋಮವಾರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಏಪ್ರಿಲ್ 26ರಂದು ವಯನಾಡು ಕ್ಷೇತ್ರಕ್ಕೆ ಮತದಾನವಾಗಲಿದ್ದು, ಸತತ ಎರಡನೇ ಬಾರಿ ಗೆಲುವಿನ ವಿಶ್ವಾಸ ಹೊಂದಿದ್ದಾರೆ.

ಚುನಾವಣಾಧಿಕಾರಿಗಳು ನಡೆಸಿದ ತಪಾಸಣೆ ವೇಳೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ನಲ್ಲಿ ಯಾವುದೇ ಅಕ್ರಮ ಪತ್ತೆಯಾಗಿಲ್ಲ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments