Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ದೇಶದಲ್ಲಿ 5 ವರ್ಷಗಳಲ್ಲೇ ವಾಡಿಕೆಗಿಂತ ಕನಿಷ್ಠ ಮಳೆ: ಈಶಾನ್ಯದಲ್ಲಿ ಶತಮಾನದ ಗರಿಷ್ಠ ಉಷ್ಣಾಂಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
rain news

ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ 1901ರ ನಂತರದ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ದೇಶದಲ್ಲಿ ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ ಸರಾಸರಿ 31.73 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುತ್ತದೆ. ಆದರೆ ಈ ಬಾರಿ 38.02 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 1.96 ಡಿಗ್ರಿ ಹೆಚ್ಚು ದಾಖಲಾಗಿತ್ತು. 25.44 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ದಾಖಲಾಗಿದ್ದು, ಸಾಧಾರಣಕ್ಕಿಂತ 1.36 ಡಿಗ್ರಿ ಹೆಚ್ಚಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ದೇಶಾದ್ಯಂತ ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದ್ದು, ಕಳೆದ 5 ವರ್ಷದಲ್ಲೇ ಕನಿಷ್ಠ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ದೇಶದಲ್ಲಿ 168 ಮಿ.ಮೀ. ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ 147.2ರಷ್ಟು ಮಿ.ಮೀ. ಮಳೆಯಾಗಿದೆ. 2001ರ ನಂತರ ಅತ್ಯಂತ ಕನಿಷ್ಠ ಮಳೆ ದಾಖಲಾಗಿರುವುದು 7ನೇ ಬಾರಿಯಾಗಿದೆ. ಕಳೆದ 5 ವರ್ಷಗಳಲ್ಲಿ ಕನಿಷ್ಠ ಮಳೆ ದಾಖಲಾಗಿದೆ.  ಈ ಬಾರಿಯ ಜೂನ್ ನಲ್ಲಿ 87 ಸೆ.ಮೀ. ಮಳೆಯಾಗಿದ್ದು, ಶೇ.15ರಷ್ಟು ಕಡಿಮೆ ಆಗಿದೆ.

ಈಶಾನ್ಯ ರಾಜ್ಯಗಳಲ್ಲಿ ಶೇ.33ರಷ್ಟು ಮಳೆ ಕೊರತೆ ಉಂಟಾಗಿದೆ. ಈ ಬಾರಿ ನಿರೀಕ್ಷಿತವಾಗಿ ಕೇರಳ ಗಡಿಯನ್ನು ಪ್ರವೇಶಿಸಿತ್ತು. ಆದರೆ ನಂತರ ದುರ್ಬಲಗೊಂಡಿದ್ದರಿಂದ ಉತ್ತರ ಭಾರತ, ಈಶಾನ್ಯ ರಾಜ್ಯಗಳಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment