ದೂರು ನೀಡಲು ಬಂದ ಮಹಿಳೆ ಜೊತೆ ಪೊಲೀಸ್ ಠಾಣೆಯಲ್ಲೇ ರಾಸಲೀಲೆ ನಡೆಸಿದ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆ ದೂರು ನೀಡಲು ಬಂದಿದ್ದಾಗ ಆಕೆಯನ್ನು ಪುಸಲಾಯಿಸಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು. ಈ ದೃಶ್ಯವನ್ನು ಕಿಟಕಿ ಮೂಲಕ ಸೆರೆ ಹಿಡಿದಿದ್ದ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ಗೃಹ ಸಚಿವ ಪರಮೇಶ್ವರ್ ಅವರ ಕ್ಷೇತ್ರವಾದ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಈ ಘಟನೆ ನಡೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ವೀಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ ಪಿ ರಾಮಚಂದ್ರಪ್ಪ ತಲೆ ಮರೆಸಿಕೊಂಡಿದ್ದರು.
ಅಮಾನತುಗೊಂಡಿದ್ದ ರಾಮಚಂದ್ರಪ್ಪ ಅವರನ್ನು ಅವರೇ ಸೇವೆ ಸಲ್ಲಿಸುತ್ತಿದ್ದ ಮಧುಗಿರಿ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.