Tuesday, October 15, 2024
Google search engine
Homeಅಪರಾಧಮೈಸೂರಿನ ರೇವ್ ಪಾರ್ಟಿ ಮೇಲೆ ದಾಳಿ: 50ಕ್ಕೂ ಹೆಚ್ಚು ಮಂದಿ ವಶಕ್ಕೆ

ಮೈಸೂರಿನ ರೇವ್ ಪಾರ್ಟಿ ಮೇಲೆ ದಾಳಿ: 50ಕ್ಕೂ ಹೆಚ್ಚು ಮಂದಿ ವಶಕ್ಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ಧತೆ ನಡೆದಿರುವ ಮಧ್ಯೆ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಹೊರವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಕೆಲವರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ರೇವ್ ಪಾರ್ಟಿಯಲ್ಲಿ 150ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದು, ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ ಕೂಡಾ ಆಗಮಿಸಿದ್ದರು ಎಂದು ಹೇಳಲಾಗಿದೆ. ಪಾರ್ಟಿಗೆ ತಲಾ 2000 ರೂ. ಶುಲ್ಕ ವಸೂಲು ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಅಡಿಷನಲ್ ಎಸ್‌ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಸ್ಥಳದಲ್ಲಿ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ (FSL) ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಹಾಗೂ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments