ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ.
ಸುರಾನ್ ಕೋಟ್ ಬಳಿಯ ಸನಾಯಿ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮಾಹಿತಿ ಲಭಿಸುತ್ತಿದ್ದಂತೆ ಪೊಲೀಸರು ಹಾಗೂ ತುರ್ತು ಚಿಕಿತ್ಸಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಉಗ್ರರ ದಾಳಿಯಲ್ಲಿ ಹಲವಾರು ವಾಯುಪಡೆ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಇದೇ ವೇಳೆ ರೇವಣ್ಣ ಬೆಂಬಲಿಗರಿಂದ ಕಿಡ್ನಾಪ್ ಆಗಿದ್ದ ಮನೆಕೆಲಸದ ಮಹಿಳೆಯನ್ನು ರಕ್ಷಿಸಲಾಗಿದ್ದು, ಆಕೆಯಿಂದ ಮಾಹಿತಿ ಪಡೆಯಲಾಗುತ್ತಿದೆ. ಇದೇ ವೇಳೆ ಪ್ರಜ್ವಲ್ ರೇವಣ್ಣ ನೇರವಾಗಿ ಕೋರ್ಟ್ ಗೆ ಹಾಜರಾಗಿ ಜಾಮೀನಿಗೆ ಪ್ರಯತ್ನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.