Wednesday, July 3, 2024
Google search engine
Homeಕ್ರೀಡೆರಿಷಭ್ ಪಂತ್ ಐಪಿಎಲ್ ಗೆ ವಾಪಸ್!

ರಿಷಭ್ ಪಂತ್ ಐಪಿಎಲ್ ಗೆ ವಾಪಸ್!

ಅಪಘಾತದಲ್ಲಿ ಸಾವಿನ ದವಡೆಯಿಂದ ಪಾರಾಗಿ ಬಂದ ವಿಕೆಟ್ ಕೀಪರ್ ರಿಷಭ್ ಪಂತ್ ಫಿಟ್ ಎಂದು ಘೋಷಿಸಲಾಗಿದ್ದು, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ.

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ರಿಷಭ್ ಪಂತ್ ಆಡಬಹುದು ಎಂದು ಪ್ರಮಾಣಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ಆರಂಭವಾಗಲಿರುವ ಐಪಿಎಲ್ ನಲ್ಲಿ ಆಡಲಿದ್ದಾರೆ.

2022, ಡಿಸೆಂಬರ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಮೂಲಗಳ ಪ್ರಕಾರ ಪಂತ್ ಕಳೆದ ವಾರ ಆಡಲು ಯೋಗ್ಯ ಎಂದು ಪ್ರಮಾಣಪತ್ರ ನೀಡಿದೆ.

ರಿಷಭ್ ಪಂತ್ ಪ್ರಸ್ತುತ ಐಪಿಎಲ್ ಜಾಹಿರಾತಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣ ಮುಗಿದ ನಂತರ ವಿಶಾಖಪಟ್ಟಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments