Saturday, June 29, 2024
Google search engine
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷದ ಪ್ರಮುಖ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ಮರು ನೇಮಕ!

ಕಾಂಗ್ರೆಸ್ ಪಕ್ಷದ ಪ್ರಮುಖ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ಮರು ನೇಮಕ!

ಲೋಕಸಭಾ ಚುನಾವಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ ಒಂದು ತಿಂಗಳ ಬಳಿಕ ಕಾಂಗ್ರೆಸ್ ಓವರ್ ಸೀಸ್ ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ.

ಭಾರತೀಯರ ಚರ್ಮದ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಲೋಕಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದ್ದೂ ಅಲ್ಲದೇ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸ್ಯಾಮ್ ಪಿತ್ರೋಡಾ ಅವರನ್ನು ಭಾರತದ ಹೊರಗಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಯಾಮ್ ಪಿತ್ರೋಡಾ ಅವರನ್ನು ಓವರ್ ಸೀಸ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments