ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇಮಕಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೆಹಲಿ ಹೈಕೋರ್ಟ್ ನಿಂದ 2019ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಗೊಂಡಿದ್ದ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದರು. ಸೇವಾನುಭವದಲ್ಲಿ ಹಿರಿಯರಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಡಿವೈ ಚಂದ್ರಚೂಡ್ ನವೆಂಬರ್ 11ರಂದು ನಿವೃತ್ತಿ ಹೊಂದಲಿದ್ದು, ಅದೇ ದಿನವೇ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಲ್ ತಿಳಿಸಿದ್ದಾರೆ.
ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಮೇ 13, 2025ರಂದು ನಿವೃತ್ತರಾಗಲಿದ್ದಾರೆ. ಸಂಜೀವ್ ಖನ್ನಾ ಚುನಾವಣಾ ಬಾಂಡ್ ಸೇರಿದಂತೆ ಪ್ರಮುಖ ತೀರ್ಮಾನ ಪ್ರಕಟಿಸಿದ ಸಂವಿಧಾನ ಪೀಠದ ನ್ಯಾಯಮೂರ್ತಿಯಾಗಿ ಗಮನ ಸೆಳೆದಿದ್ದರು.