Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ದೇಶದ ಅತ್ಯಂತ ಶ್ರೀಮಂತೆ ಸಾವಿತ್ರಿ ಜಿಂದಾಲ್ ಜಯಭೇರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
savitri jindal
ದೇಶದ ಅತ್ಯಂತ ಶ್ರೀಮಂತೆ ಸಾವಿತ್ರಿ ಜಿಂದಾಲ್ ಜಯಭೇರಿ

ಬಿಜೆಪಿಯಿಂದ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದೇಶದ ಅತ್ಯಂತ ಶ್ರೀಮಂತೆ ಸಾವಿತ್ರಿ ಜಿಂದಾಲ್ ಹರಿಯಾಣದ ಹಿಸ್ಸಾರ್ ಕ್ಷೇತ್ರದಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

ಪ್ರತಿಸ್ಪರ್ಧಿಗಳಾದ ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ನ ರಾಮ್ ನಿವಾಸ್ ಅವರನ್ನು ಸೋಲಿಸಿದ ಸಾವಿತ್ರಿ ಜಿಂದಾಲ್ 18,941 ಮತಗಳಿಂದ ಗೆಲುವು ದಾಖಲಿಸಿದ್ದಾರೆ.

74 ವರ್ಷದ ಸಾವಿತ್ರಿ ಜಿಂದಾಲ್ 2005ರಲ್ಲಿ ಪತಿ ಓಪಿ ಜಿಂದಾಲ್ ಸಾವಿನ ನಂತರ ರಾಜಕೀಯಕ್ಕೆ ಪ್ರವೇಶಿಸಿದ್ದರು.  ಹಿಸ್ಸಾರ್ ವಿಧಾನಸಭಾ ಕ್ಷೇತ್ರದಿಂದ ಇದೀಗ ಮೂರನೇ ಬಾರಿ ಗೆಲುವು ದಾಖಲಿಸಿದ್ದಾರೆ. 2005 ಮತ್ತು 2009ರಲ್ಲಿ ಕಳೆದ ಎರಡು ಬಾರಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದರು.

ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ತಾಯಿ ಸಾವಿತ್ರಿ ಜಿಂದಾಲ್ ಬಿಜೆಪಿ ಟಿಕೆಟ್ ದೊರೆಯದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು.

ಸಾವಿತ್ರಿ ಜಿಂದಾಲ್ 3.25 ಲಕ್ಷ ಕೋಟಿ ಆಸ್ತಿ ಹೊಂದಿದ್ದಾರೆ. ಚುನಾವಣೆಗೆ ಘೋಷಿಸಿದ ಆಸ್ತಿ ವಿವರದಲ್ಲಿ ವೈಯಕ್ತಿಕವಾಗಿ 270 ಕೋಟಿ ರೂ. ಸ್ಥಿರಾಸ್ಥಿ ಹಾಗೂ 80 ಕೋಟಿ ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದರು. ದೇಶದ ಅತ್ಯಂತ ಶ್ರೀಮಂತೆ ಹಾಗೂ ಒಟ್ಟಾರೆ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment