Thursday, September 19, 2024
Google search engine
Homeತಾಜಾ ಸುದ್ದಿಶಾರೂಖ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಮುಂಬೈಗೆ ವಾಪಸ್!

ಶಾರೂಖ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಮುಂಬೈಗೆ ವಾಪಸ್!

ಬಾಲಿವುಡ್ ನಟ ಹಾಗೂ ಐಪಿಎಲ್ ನ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರೂಖ್ ಖಾನ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಕ್ವಾಲಿಫೈಯರ್-1 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಗೆ ಪ್ರವೇಶಿಸಿತ್ತು. ಈ ಪಂದ್ಯ ವೀಕ್ಷಿಸಲು ಆಗಮಿಸಿದ್ದ ಶಾರೂಖ್ ಖಾನ್ ನಂತರ ಅನಾರೋಗ್ಯದ ಕಾರಣ ಅಹಮದಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೋಲ್ಕತಾದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಪ್ರಮಾಣ ಹೆಚ್ಚಾಗಿದ್ದು, ಇದರಿಂದ ನೀರಿನಾಂಶ ಕಡಿಮೆ ಆಗಿ ಶಾರೂಖ್ ಖಾನ್ ಅಸ್ವಸ್ಥಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುರುವಾರ ಮಧ್ಯಾಹ್ನ ಶಾರೂಖ್ ಖಾನ್ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮುಂಬೈನ ತಮ್ಮ ನಿವಾಸದತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments