Friday, May 17, 2024
Google search engine
Homeತಾಜಾ ಸುದ್ದಿಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಾಟ!

ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಾಟ!

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮುಂದೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಾಟ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮುಂಬೈನ ಬಾಂದ್ರಾ ನಿವಾಸ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ಬಳಿ ದುಷ್ಕರ್ಮಿಗಳು 4 ಸುತ್ತು ಗುಂಡು ಹಾರಿಸಿದ್ದು, ಯಾವುದೇ ಸಾವು-ನೋವು ಅಥವಾ ಗಾಯಗೊಂಡ ವರದಿಗಳು ಬಂದಿಲ್ಲ.

ಸಲ್ಮಾನ್ ಖಾನ್ ತಂದೆ ಸಲೀಂ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆ ಬಗ್ಗೆ ಹೇಳಲು ಏನೂ ಇಲ್ಲ. ಪ್ರಚಾರಕ್ಕಾಗಿ ಯಾರೋ ಹೀಗೆ ಮಾಡಿದ್ದಾರೆ ಅಷ್ಟೆ. ಇದರಿಂದ ಯಾವುದೇ ಹಾನಿ ಆಗಿಲ್ಲ ಎಂದು ಹೇಳಿದ್ದಾರೆ.

ಘಟನೆ ಬೆನ್ನಲ್ಲೇ ಪೊಲೀಸರು ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಸುರಕ್ಷತೆಯ ಭರವಸೆ ನೀಡಿದ್ದಾರೆ. ಇದೇ ವೇಳೆ ಸಲ್ಮಾನ್ ಖಾನ್ ಕೂಡ ತಮ್ಮ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments