Sunday, September 8, 2024
Google search engine
Homeಜಿಲ್ಲಾ ಸುದ್ದಿ35 ವಯಸ್ಸಿಗೆ ವಿಧಿವಶರಾದ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ!

35 ವಯಸ್ಸಿಗೆ ವಿಧಿವಶರಾದ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ!

ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾ ಸ್ವಾಮೀಜಿ ಮಠದಲ್ಲಿಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಸೋಮವಾರ ನಸುಕಿನ ಜಾವ ಹೃದಯಾಘಾತದಿಂದ ಸ್ವಾಮಿಗಳು ಮೃತಪಟ್ಟಿದ್ದಾರೆ.

ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments