Friday, May 17, 2024
Google search engine
Homeಜಿಲ್ಲಾ ಸುದ್ದಿಗೃಹಲಕ್ಷ್ಮೀ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ: ವಾಲ್ ಪೇಪರ್ ನಲ್ಲಿ ರಾರಾಜಿಸಿದ ಸಿದ್ದರಾಮಯ್ಯ ಫೋಟೊ!

ಗೃಹಲಕ್ಷ್ಮೀ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ: ವಾಲ್ ಪೇಪರ್ ನಲ್ಲಿ ರಾರಾಜಿಸಿದ ಸಿದ್ದರಾಮಯ್ಯ ಫೋಟೊ!

ಪ್ರತೀ ತಿಂಗಳು ಮನೆಯ ಯಜಮಾನಿ ಖಾತೆಗೆ 2000 ರೂ. ಜಮಾ ಮಾಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀಯಿಂದ ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ ಪೇಪರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೊ ಹಾಕಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ್ದು ಭಾರೀ ಸುದ್ದಿಯಾಗಿತ್ತು. ಅಲ್ಲದೇ ಶಕ್ತಿ ಯೋಜನೆಯ ಯಶಸ್ಸಿನಿಂದ ಮಹಿಳೆಯರು ತೃಪ್ತಿ ವ್ಯಕ್ತಪಡಿಸಿದ್ದು, ರಾಜ್ಯದ ಎಲ್ಲಾ ಪ್ರಮುಖ ದೇವಸ್ಥಾನಗಳ ದರ್ಶನ ಮಾಡಿದ್ದಾಗಿ ಸಂತಸ ವ್ಯಕ್ತಪಡಿಸಿದ್ದರು.

ಇದೀಗ ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿಸಿ ಸಿದ್ದರಾಮಯ್ಯ ಫೋಟೊ ಹಾಕಿಕೊಂಡಿದ್ದಾರೆ. ಈ ವಿಷಯವನ್ನು ಸ್ವತಃ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಾರ್ಥಕವಾಯಿತು ಎಂದು ಬಣ್ಣಿಸಿದ್ದಾರೆ.

ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments