ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ಹಲವು ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಧಾನಿಯಿಂದ 150 ಕಿ.ಮೀ. ದೂರದ ಸಾಂಸ್ಕೃತಿಕ ನಗರಿ ಹ್ಯಾಂಡ್ಲೊವಾದಲ್ಲಿ ಬೆಂಬಲಿಗರನ್ನು ಭೇಟಿ ಮಾಡಿದ್ದ 59 ವರ್ಷದ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ.
ಹೊಟ್ಟೆಗೆ ಗುಂಡು ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿರುವ ರಾಬರ್ಟ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆದಿದೆ.
ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆ ನಡೆದಿರುವ ನಡುವೆ ಈ ಗುಂಡಿನ ದಾಳಿ ನಡೆದಿದ್ದು, ಗುಂಡು ಹಾರಿಸಿದ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.