Thursday, November 21, 2024
Google search engine
Homeಕಾನೂನುಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಸ್ರುಪೀಂಕೋರ್ಟ್ ನಿರಾಕರಿಸಿದೆ.

ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ಸೋಮವಾರ ಜಾಮೀನು ನೀಡಲು ನಿರಾಕರಿಸಿತು.

supreme court

ಆರೋಪಿಯ ವಿರುದ್ಧ ಇನ್ನೂ ಹಲವು ದೂರುಗಳಿವೆ. ಅಲ್ಲದೇ ಆರೋಪಿ ಹಾಗೂ ಅವರ ಕುಟುಂಬ ಸಾಕಷ್ಟು ಪ್ರಭಾವಶಾಲಿಯಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯಿತು.

ನಾನು 6 ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ? ಎಂದು ವಕೀಲ ರೋಹಟಗಿ ವಿನಂತಿಸಿದರು ಇದಕ್ಕೆ ನಾವು ಏನನ್ನೂ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ತ್ರಿವೇದಿ ಪ್ರತಿಕ್ರಿಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments