Home ಕಾನೂನು ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ನಿಮಗೆ ಬೇಡವಾ: ಸುಪ್ರೀಂಕೋರ್ಟ್ ಪ್ರಶ್ನೆ

ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ನಿಮಗೆ ಬೇಡವಾ: ಸುಪ್ರೀಂಕೋರ್ಟ್ ಪ್ರಶ್ನೆ

by Editor
0 comments
supreme court

ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮಾಜವಾದ ಮತ್ತು ಜಾತ್ಯತೀಯ ಭಾರತ ಸಂವಿಧಾನದ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ಹಲವಾರು ಬಾರಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದು ಹೇಳಿತು.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, 1976ರಲ್ಲಿ ಸಂಸತ್ ನಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗದೇ 42ನೇ ಸಂವಿಧಾನ ತಿದ್ದುಪಡಿಯಲ್ಲಿ ಈ ಬದಲಾವಣೆ ಮಾಡಲಾಗಿದ್ದು, ಸಮಾಜವಾದ ಮತ್ತು ಜಾತ್ಯಾತೀತ ಪದಗಳನ್ನು ಸೇರಿಸಲಾಗಿದೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ಅವರ ವಾದವನ್ನು ಆಲಿಸಿತು.

ನ್ಯಾಯಮೂರ್ತಿ ಸಂಜೀವ್ ಖನ್ನಾ, ಎರಡೂ ಪದಗಳ ಅರ್ಥವನ್ನು ಪಾಶ್ಚಿಮಾತ್ಯ ಶೈಲಿಯಲ್ಲಿ ಅರ್ಥ ಮಾಡಿಕೊಳ್ಳಬೇಡಿ. ಸಮಾಜವಾದ ಎಂದರೆ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಬೇಕು ಎಂಬುದಾಗಿದೆ. ಜಾತ್ಯಾತೀತ ಎಂದರೆ ಎಲ್ಲಾ ಜಾತಿ ಮತ್ತು ಧರ್ಮವರನ್ನು ಒಳಗೊಂಡಂತೆ ಎಂಬ ಅರ್ಥ. ಅದನ್ನು ವಿಶೇಷ ರೀತಿಯಲ್ಲಿ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಇದರ ಬಗ್ಗೆ ಸಾಕಷ್ಟು ತೀರ್ಪುಗಳು ಬಂದಿರುವುದನ್ನು ನೀವು ಗಮನಿಸಬೇಕು ಎಂದು ಸಲಹೆ ನೀಡಿದರು.

banner

ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿಕೆಯಿದ ಈ ನಿಯಮಗಳ ಮೇಲೆ ಪರಿಣಾಮ ಬೀರಿತು. ನ್ಯಾಯಮೂರ್ತಿಗಳೇ ಈ ಪದವನ್ನು ಸೂಕ್ತವಾಗಿ ವಿಶ್ಲೇಷಿಸಿರುವುದರಿಂದ ಪ್ರತ್ಯೇಕವಾಗಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಪ್ರತಿವಾದಿ ಅಶ್ವಿನಿ ಉಪಾಧ್ಯಾಯ ತಿಳಿಸಿದರು.

ಈ ವೇಳೆ ವಿಷ್ಣು ಶಂಕರ್ ಜೈನ್ ವಾದ ಮಂಡಿಸಲು ಹೋದಾಗ, ನಿಮಗೆ ದೇಶ ಜಾತ್ಯಾತೀತ ರಾಷ್ಟ್ರವಾಗಿರುವುದು ಇಷ್ಟ ಇಲ್ಲವೇ ಎಂದು ಪ್ರಶ್ನಿಸಿದಾಗ, ನಾವು ಭಾರತ ಜಾತ್ಯಾತೀತ ರಾಷ್ಟ್ರ ಅಲ್ಲ ಎಂದು ಹೇಳುತ್ತಿಲ್ಲ. ಆದರೆ ವಿಧೇಯಕವನ್ನು ಪ್ರಶ್ನಿಸುತ್ತಿದ್ದೇವೆ ಎಂದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ Tirupati ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಕೇಳಿದಷ್ಟು ಸಿಗಲಿದೆ `ಲಡ್ಡು’ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲು: 3 ತಿಂಗಳಿಗೆ ಫ್ರಾನ್ಸ್  ಸರಕಾರ ಪತನ