Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಕಾನೂನು

ಮತದಾನದ ದಾಖಲೆ ಗೌಪ್ಯತೆ: ಚುನಾವಣಾ ಆಯೋಗ, ಕೇಂದ್ರಕ್ಕೆ ಸುಪ್ರೀಂ ನೋಟಿಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
supreme court
supreme court

ಸಿಸಿಟಿವಿ ಮತ್ತು ಇತರ ಚುನಾವಣಾ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರಿಗೆ ನೀಡದ ಸರಕಾರದ ಕ್ರಮದ ವಿರುದ್ಧ ಸಲ್ಲಿಸಲಾಗಿರುವ ಅರ್ಜೀಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದಿಂದ ಈ ಕುರಿತು ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಅವರ ವಾದಗಳನ್ನು ಪರಿಗಣಿಸಿ, ಅರ್ಜಿಯ ಮೇಲೆ ನೋಟಿಸ್ ಜಾರಿಗೊಳಿಸಿದೆ.

ಮಾರ್ಚ್ 17ರಿಂದ ಆರಂಭವಾಗುವ ವಾರದಲ್ಲಿ ಅರ್ಜಿಯ ವಿಚಾರಣೆ ನಡೆಸುವುದಗಿ ಪೀಠ ಹೇಳಿದೆ.

ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್ಕಾಸ್ಟಿಂಗ್ ದೃಶ್ಯಾವಳಿಗಳು ಹಾಗೂ ಅಭ್ಯರ್ಥಿಗಳ ವಿಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ. ಹೀಗಾಗಿ ಏಕಪಕ್ಷೀಯವಾಗಿ ಮತ್ತು ಮಾತುಕತೆ ಇಲ್ಲದೆ ಇಂತಹ ತಿದ್ದುಪಡಿ ಮಾಡಲು ಬಿಡಬಾರದು ಎಂದು ರಮೇಶ್ ಹೇಳಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿಸುವ ಅಗತ್ಯ ಮಾಹಿತಿ ಸಾರ್ವಜನಿಕರಿಗೆ ಸಿಗದಂತೆ ತಿದ್ದುಪಡಿ ಮೂಲಕ ನಿರ್ಬಂಧಿಸಲಾಗಿದೆ ಎಂದಿದ್ದರು.

ಚುನಾವಣಾ ಆಯುಕ್ತರ ಸಮರ್ಥನೆ

ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್, ಬಲವಾಗಿ ಸಮರ್ಥಿಸಿಕೊಂಡಿದ್ದರು.

`ಮತದಾರರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಮತಗಟ್ಟೆಯಲ್ಲಿನ ಸಿ.ಸಿ.ಟಿವಿ ದೃಶ್ಯಗಳನ್ನು ಸಾರ್ವಜನಿಕ ಪರಿಶೀಲನೆಗೆ ಒಳಪಡಿಸುವುದನ್ನು ನಿರ್ಬಂಧಿಸಲಾಗಿದೆ. `ಮತಗಟ್ಟೆಗೆ ಸಂಬಂಧಿಸಿದ ದತ್ತಾಂಶಗಳ ಬಳಸಿ, ಸುಳ್ಳು ಸಂಕಥನ ಸೃಷ್ಟಿಸುವುದನ್ನು ತಡೆಯುವ ಉದ್ದೇಶದಿಂದಲೂ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದಿದ್ದರು.

10.5 ಲಕ್ಷ ಮತಗಟ್ಟೆಗಳಲ್ಲಿ 10 ಗಂಟೆಯಷ್ಟು ಮತದಾನ ನಡೆಯುತ್ತದೆ. ಅಂದರೆ, ಅಂದಾಜು ಒಂದು ಕೋಟಿ ಗಂಟೆಗಳಷ್ಟು ದತ್ತಾಂಶ ಸಂಗ್ರಹವಾಗುತ್ತದೆ. ಒಬ್ಬ ವ್ಯಕ್ಿ ದಿನಕ್ಕೆ 8 ಗಂಟೆ ಈ ದತ್ತಾಂಶ ವೀಕ್ಷಿಸುತ್ತಾನೆ ಅಂದುಕೊಂಡರೂ, ಎಲ್ಲ ದೃಶ್ಯಗಳನ್ನು ವೀಕ್ಷಿಸಲು ಆತನಿಗೆ 3.600 ವರ್ಷ ಬೇಕಾಗುತ್ತದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment