Home ಕ್ರೀಡೆ ಸೂರ್ಯಕುಮಾರ್ ಶತಕ: ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಜಯ

ಸೂರ್ಯಕುಮಾರ್ ಶತಕ: ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಜಯ

by Editor
0 comments

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ ಅಜೇಯ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ.

ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿದರೆ, ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಮುಂಬೈ ಇಂಡಿಯನ್ಸ್ 17.2 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈಗಾಗಲೇ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿರುವ ಮುಂಬೈ 8 ಅಂಕದೊಂದಿಗೆ ಕೊನೆಯ ಸ್ಥಾನದಿಂದ ಒಂದು ಸ್ಥಾನ ಮೇಲೇರಿ 9ನೇ ಸ್ಥಾನ ಗಳಿಸಿದರೆ, ಸನ್ ರೈಸರ್ಸ್ ಹೈದರಾಬಾದ್ 6 ಜಯ ಹಾಗೂ 5 ಸೋಲಿನೊಂದಿಗೆ 12 ಅಂಕ ಪಡೆದಿದ್ದು, ಪ್ಲೇಆಫ್ ಹಾದಿ ದುರ್ಗಮಗೊಳಿಸಿಕೊಂಡಿದೆ.

ಮುಂಬೈ ತಂಡ 31 ರನ್ ಗೆ 3 ವಿಕೆಟ್ ಕಳೆದುಕೊಂಡು ಮತ್ತೊಂದು ಸೋಲಿನ ಭೀತಿಯಲ್ಲಿತ್ತು. ಆದರೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮುರಿಯದ ನಾಲ್ಕನೇ ವಿಕೆಟ್ ಗೆ 148 ರನ್ ಜೊತೆಯಾಟ ನಿಭಾಯಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.

banner

ಸೂರ್ಯಕುಮಾರ್ ಯಾದವ್ 51 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್ ಸಹಾಯದಿಂದ ಶತಕ ಪೂರೈಸಿದರು. ತಿಲಕ್ ವರ್ಮಾ 32 ಎಸೆತಗಳಲ್ಲಿ 6 ಬೌಂಡರಿ ಒಳಗೊಂಡ 37 ರನ್ ಬಾರಿಸಿ ಔಟಾಗದೇ ಉಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ