Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
shivananda patil

ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ.

ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ಗೆ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜೆನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment