Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಬೆಂಗಳೂರಿನ ಕೆಫೆ ಶೌಚಾಯಲದ ಕಸದ ಬುಟ್ಟಿಯಲ್ಲಿ ಕ್ಯಾಮರಾ ಇರಿಸಿದ್ದ ಆರೋಪಿ ಅರೆಸ್ಟ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
bengaluru cafe

ಬೆಂಗಳೂರಿನ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇರಿಸಿ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ನಗರದ ಬಿಇಎಲ್​ ರಸ್ತೆಯಲ್ಲಿರುವ ಥರ್ಡ್ ವೇವ್ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ.

ಕಾಫಿ ಶಾಪ್​ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಮನೋಜ್ ಶನಿವಾರ (ಆಗಸ್ಟ್ 10) ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿ ಕಸದ ಬುಟ್ಟಿಯಲ್ಲಿ ರಂಧ್ರ ಕೊರೆದು ಮೊಬೈಲ್​ ಇರಿಸಿದ್ದಾನೆ.

ಮೊಬೈಲ್ ಫ್ಲೈಟ್​ ಮೂಡ್​​ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ ಹೊರ ಬಂದಿದ್ದಾನೆ. ಶೌಚಾಲಯಕ್ಕೆ ಹೋದ ಮಹಿಳೆಯೊಬ್ಬರು ಕಸದ ಬುಟ್ಟಿಯಲ್ಲಿ ಮೊಬೈಲ್​ ಇರುವುದನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸದಾಶಿವನಗರ ಪೊಲೀಸರು ಆರೋಪಿ ಮನೋಜ್​ನನ್ನು ಬಂಧಿಸಿದ್ದಾರೆ.

ನಮ್ಮ ಬೆಂಗಳೂರಿನ ಬಿಇಎಲ್ ರಸ್ತೆಯ ಶಾಖೆಯಲ್ಲಿ ನಡೆದ ಅಹಿತಕರ ಘಟನೆಗೆ ನಾವು ವಿಷಾದಿಸುತ್ತೇವೆ. ಮತ್ತು ಥರ್ಡ್ ವೇವ್ ಕಾಫಿಯಲ್ಲಿ ಅಂತಹ ಕ್ರಮಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಸಿಬ್ಬಂದಿಯನ್ನು ತಕ್ಷಣವೇ ವಜಾಗೊಳಿಸಿದ್ದೇವೆ. ನಮ್ಮ ಗ್ರಾಹಕರ ಸುರಕ್ಷತೆ ನಮಗೆ ಬಹಳ ಮುಖ್ಯ. ಈ ಪರಿಸ್ಥಿತಿಯನ್ನು ನಾವು ತ್ವರಿತವಾಗಿ ಪರಿಹರಿಸಿದ್ದೇವೆ ಎಂದು ಥರ್ಡ್ ವೇವ್ ಕೆಫೆ ಇಂಡಿಯಾ ಪ್ರತಿಕ್ರಿಯಿಸಿದೆ.

ಸಿದ್ದಾರ್ಥ ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ, ಬೆಂಗಳೂರಿನ ಥರ್ಡ್ ವೇವ್ ಕಾಫಿ ಔಟ್‌ಲೆಟ್‌ನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದೆ ಎಂದು ನಂಬಲಾಗುತ್ತಿಲ್ಲ. ಅಂತಹ ಜನಪ್ರಿಯ ಸ್ಥಳದಲ್ಲಿ ಇಂತಹವೆಲ್ಲಾ ನಡೆಬಹುದು ಎಂಬುದು ಹುಚ್ಚುತನದ ಸಂಗತಿ ಎಂದು ಟ್ವೀಟ್​ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment