Thursday, September 19, 2024
Google search engine
Homeತಾಜಾ ಸುದ್ದಿದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಡಿಸಿದ ಕೇಂದ್ರ ಸರ್ಕಾರ!

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಡಿಸಿದ ಕೇಂದ್ರ ಸರ್ಕಾರ!

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ದೇಶದಲ್ಲಿ ಪತ್ತೆಯಾಗಿರುವ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯನ್ನು ಐಸಲೋಷನ್ ನಲ್ಲಿ ಇರಿಸಲಾಗಿದೆ. ಅಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಪರಿಸ್ಥಿತಿ ಘೋಷಿಸಿರುವ ಮಂಕಿಪಾಕ್ಸ್ ಪ್ರಕರಣದ ಸೋಂಕಿಗೂ ಈಗ ಪತ್ತೆಯಾಗಿರುವ ಸೋಂಕಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದೆ.

ವಿದೇಶದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಅವರ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಿ ಪರೀಕ್ಷೆಗೊಳಪಡಿಸಲಾಗಿದೆ. ಪರೀಕ್ಷೆಯಲ್ಲಿ ಮಂಕಿಪಾಕ್ಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಜೂನ್ ತಿಂಗಳಲ್ಲಿ 30 ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಲ್ಯಾಬ್ ಪರೀಕ್ಷೆಯಲ್ಲಿ ಯಾವುದೂ ದೃಢಪಟ್ಟಿರಲಿಲ್ಲ. ಇದೀಗ ಸೋಂಕು ದೃಢಪಟ್ಟಿದ್ದರೂ ಅದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಾದರಿಯ ಸೋಂಕು ಅಲ್ಲ ಎಂದು ದೃಢಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments