Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ನಾಳೆ ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಆಗಮನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
mysore elefent

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಬುಧವಾರ ಮೈಸೂರು ಪ್ರವೇಶಿಸಿದೆ.

ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ.

ಬುಧವಾರ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ದಸರಾಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಕೆಲವೇ ದಿನಗಳ ಹಿಂದೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭು ವೀರನಹೊಸಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಾರಿ ಗಜಪಯಣಕ್ಕೆ ವಿಶೇಷ ರೀತಿಯ ರಂಗು ನೀಡುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಗಜಪಯಣ ನಡೆಯುವ ಜಾಗದಲ್ಲಿ ವಿಶಿಷ್ಟ ರೀತಿಯ ಅಲಂಕಾರಕ್ಕೆ ತಯಾರಿ ನಡೆದಿದೆ.

ವೀರನಹೊಸಹಳ್ಳಿ ಮುಖ್ಯ ದ್ವಾರದ ಬಳಿ ಪೂಜೆ ನಡೆಸುವ ಸ್ಥಳದಲ್ಲಿ ವಿಶೇಷ ಕಮಾನು ನಿರ್ಮಿಸಲಿದ್ದೇವೆ. ನಾಡಹಬ್ಬಕ್ಕೆ ಹೊಸ ಹೊಳಪು ನೀಡುವ ದೃಷ್ಟಿಕೋನದಲ್ಲಿ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಭು ತಿಳಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment