ಕ್ರೀಡಾ ಶಕ್ತಿಯಾಗಿ ದೇಶವನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, 2036ರ ಒಲಿಂಪಿಕ್ಸ್ ಕ್ರೀಡಾಕೂಟ ರಚನೆಗೆ ಅಧಿಕೃತವಾಗಿ ಬಿಡ್ ಸಲ್ಲಿಸಲು ಮುಂದಾಗಿದೆ.
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಅಧಿಕೃತವಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಗೆ ಮನವಿ ಸಲ್ಲಿಸುವ ಮೂಲಕ 2036 ಒಲಿಂಪಿಕ್ಸ್ ಆತಿಥ್ಯ ವಹಿಸಲು ಹೆಜ್ಜೆ ಮುಂದಿಟ್ಟಿದೆ.
2036ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು ಪ್ರಧಾನಿ ಮೋದಿ ಆಸಕ್ತಿ ವಹಿಸಿದ್ದು, ಜಗತ್ತಿನ ಅತೀ ದೊಡ್ಡ ಕ್ರೀಡಾಕೂಟವನ್ನು ಆಯೋಜಿಸಲು ಬಿಡ್ ಸಲ್ಲಿಸಲು ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ಸ್ ಸಮಿತಿ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ 2036 ಒಲಿಂಪಿಕ್ಸ್ ಆಯೋಜಿಸಲು ಆಸಕ್ತಿ ವಹಿಸಿದ್ದು, ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರ ಜೊತೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೀಗ ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಡಲಾಗಿದೆ.