Sunday, September 8, 2024
Google search engine
Homeಜಿಲ್ಲಾ ಸುದ್ದಿಹಾವೇರಿ: ಮನೆಯ ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರ ದುರ್ಮರಣ

ಹಾವೇರಿ: ಮನೆಯ ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರ ದುರ್ಮರಣ

ಭಾರೀ ಮಳೆಯಿಂದಾಗಿ ಮನೆಯ ಮೇಲ್ಫಾವಣಿ ಕುಸಿದ ಪರಿಣಾಮ ಅವಳಿ ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಸಂಭವಿಸಿದೆ.

ಮಾದಾಪುರ ಗ್ರಾಮದ ನಿವಾಸಿ ಚೆನ್ನಮ್ಮ (30) ಮತ್ತು ಅವಳಿ ಮಕ್ಕಳಾದ ಅನುಶ್ರೀ (1), ಅಮೂಲ್ಯ (1) ಮೃತ ದುರ್ದೈವಿಗಳು. ವೃದ್ಧೆ ಯಲ್ಲಮ್ಮ, ಪುತ್ರ ಮತ್ತು ಸೊಸೆ ಗಾಯಗೊಂಡಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

haveri

ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 3:30ಕ್ಕೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯಲ್ಲಿ ಎಲ್ಲರೂ ಮಲಗಿರುವಾಗ ಈ ದುರ್ಘಟನೆ ಸಂಭವಿಸಿದ್ದರಿಂದ ನೆರೆಹೊರೆಯವರು ನೆರವಿಗೆ ಬರಲು ತಡವಾಗಿದೆ.

ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments