Home ಜಿಲ್ಲಾ ಸುದ್ದಿ ಗಂಡನ ಘನತೆಗಿಂತ ಸೈಟು ದೊಡ್ಡದಲ್ಲ: 14 ಮುಡಾ ಸೈಟು ಹಿಂತಿರುಗಿಸಲು ಸಿದ್ದರಾಮಯ್ಯ ಪತ್ನಿ ಪತ್ರ!

ಗಂಡನ ಘನತೆಗಿಂತ ಸೈಟು ದೊಡ್ಡದಲ್ಲ: 14 ಮುಡಾ ಸೈಟು ಹಿಂತಿರುಗಿಸಲು ಸಿದ್ದರಾಮಯ್ಯ ಪತ್ನಿ ಪತ್ರ!

by Editor
0 comments
siddaramiah

ಮುಡಾ ಪ್ರಕರಣದ ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 14 ಸೈಟುಗಳನ್ನು ವಾಪಸ್ ಪಡೆಯುವಂತೆ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಆರಂಭಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ. ಇದರಿಂದ ಮುಡಾ ಪ್ರಕರಣದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಮುಡಾ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ, ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನಿಂದ ಅವರ ಘನತೆಗೆ ಧಕ್ಕೆ ಬರಬಾರದು ಎಂಬ ಕಾರಣಕ್ಕೆ ಮುಡಾ ನೀಡಿದ ಸೈಟು ಹಿಂತಿರುಗಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಸಾಧ್ಯವಾದಷ್ಟು ಬೇಗ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.

ಮುಡಾ ಆಯುಕ್ತರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ ಪತ್ರ ವಿವರ ಹೀಗಿದೆ.

banner

ಮೈಸೂರು ತಾಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು.

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ. ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ