Home ತಾಜಾ ಸುದ್ದಿ ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ!

ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ!

by Editor
0 comments

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮೇಕೆದಾಟು ಯೋಜನೆಗೆ ಶೀಘ್ರ ಅನುಮತಿ ನೀಡಬೇಕು ಹಾಗೂ ರಾಜ್ಯಕ್ಕೆ ಬರಬೇಕಾದ ಪಾಲನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ನಿಯೋಗ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಪ್ರಮುಖ ನೀರಾವರಿ ಯೋಜನೆಗಳು

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ. ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

banner

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ  ಹಾಗೂ  ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ   ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3 ನೇ ಹಂತದ  44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ  ಡಿಪಿಆರ್ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದಿಂದ ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ  ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್ ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!