Monday, September 16, 2024
Google search engine
Homeತಾಜಾ ಸುದ್ದಿಒಂದೇ ಕಡೆ 5 ವರ್ಷ ಪೂರೈಸಿದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ

ಒಂದೇ ಕಡೆ 5 ವರ್ಷ ಪೂರೈಸಿದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ

ಒಂದೇ ಕಡೆ 5 ವರ್ಷಕ್ಕಿಂತ ಅಧಿಕ ಸಮಯ ಇರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ನಿಯಮದ ಪ್ರಕಾರ ಪೊಲೀಸ್ ಸಿಬ್ಬಂದಿ 3 ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೇ ಜಾಗದಲ್ಲಿ ಇರುವಂತಿಲ್ಲ. ಆದರೂ 5 ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಪೊಲೀಸ್ ಪೇದೆ, ಹೆಡ್ ಕಾನ್ಸ್ ಟೇಬಲ್ ಹಾಗೂ ಪಿಎಸ್ ಐಗಳನ್ನು ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ.

ಒಂದೇ ಠಾಣೆ ಅಥವಾ ಒಂದೇ ಸ್ಥಳದಲ್ಲಿ ಓಓಡಿ ಆಧಾರದ ಮೇಲೆ ಪದೇಪದೆ ಅದೇ ಸ್ಥಳದಲ್ಲಿ ಮುಂದುವರಿಯುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆದೇಶಿಸಲಾಗಿದೆ.

ಜುಲೈ 6ರಂದು ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಯಾವುದೇ ಕಾರಣಕ್ಕೂ ಪೊಲೀಸ್ ಪೇದೆ, ಹೆಡ್ ಕಾನ್ಸ್ ಟೇಬಲ್ ಮತ್ತು ಪಿಎಸ್ ಐಗಳನ್ನು ಅದೇ ಸ್ಥಳದಲ್ಲಿ ಮುಂದುವರಿಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

police

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments