Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

5,225 ಕಿ.ಮೀ. ಉದ್ದದ ರಸ್ತೆಯನ್ನು ಹೆದ್ದಾರಿಯಾಗಿ ಘೋಷಿಸಲು ನಿತಿನ್ ಗಡ್ಕರಿಗೆ ರಾಜ್ಯ ಸರ್ಕಾರ ಮನವಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 37 ವೀಕ್ಷಣೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.

ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.

ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ

ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.

ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.

ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.

ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ  ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment