Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

4ನೇ ಅವಧಿಗೆ ನಮ್ಮ ಸರ್ಕಾರ ಬರುವ ಗ್ಯಾರಂಟಿ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ ಬಾಂಬ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
nitin gadkari
nitin gadkari

ನಾಲ್ಕನೇ ಅವಧಿಗೆ ನಮ್ಮ ಸರ್ಕಾರ (ಬಿಜೆಪಿ ನೇತೃತ್ವದ ಎನ್ ಡಿಎ) ಅಧಿಕಾರಕ್ಕೆ ಬರುತ್ತದೆ ಎಂಬ ಗ್ಯಾರಂಟಿ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಲ್ಕನೇ ಅವಧಿಗೆ ನಮ್ಮ ಸರ್ಕಾರ ಬರುತ್ತದೆ ಎಂಬುದಕ್ಕೆ ಗ್ಯಾರಂಟಿ ಇಲ್ಲ. ಆದರೆ ನೀವು ಮತ್ತೆ ಸಚಿವರಾಗುತ್ತಿರ ಎಂದು ಕೇಂದ್ರ ಸಚಿವ ರಾಮದಾಸ್ ಅತಾವಳೆಗೆ ಹೇಳಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ ಪಿಐ) ಪಕ್ಷದ ರಾಮದಾಸ್ ಅತವಾಳೆ ಕೇಂದ್ರದಲ್ಲಿ ಸಚಿವರಾಗಿದ್ದು, ಅವರ ನಂತರ ಭಾಷಣ ಮಾಡಿದ ಅವರು, ಈ ಹೇಳಿಕೆ ನೀಡಿದ್ದು, ನಂತರ ನಾನು ಇದನ್ನು ತಮಾಷೆಗಾಗಿ ಹೇಳುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು.

ಕೇಂದ್ರದಲ್ಲಿ ಸತತ ಮೂರು ಬಾರಿ ಸಚಿವರಾಗಿರುವ ರಾಮ್ ದಾಸ್ ಅತವಾಳೆ, ಮುಂದಿನ ಬಾರಿಯೂ ಬಿಜೆಪಿಯೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ನಾನು ಮತ್ತೆ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಟಾಂಗ್ ನೀಡಿದ ನಿತಿನ್ ಗಡ್ಕರಿ, ನಮ್ಮ ಸರ್ಕಾರ ಬರುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ನೀವು ಮತ್ತೆ  ಸಚಿವರಾಗುವುದು ಖಚಿತ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಮಯುತಿ ಮೈತ್ರಿ ಸರ್ಕಾರ ರಚನೆಯಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆರ್ ಪಿಐ ಪಕ್ಷ ಕನಿಷ್ಠ 10ರಿಂದ 12 ಸ್ಥಾನದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ರಾಮದಾಸ್ ಅತವಾಳೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment