Monday, May 6, 2024
Google search engine
Homeಜಿಲ್ಲಾ ಸುದ್ದಿಕೆರೆಯಲ್ಲಿ ಈಜಲು ಹೋದ ಮೂರು ಮಕ್ಕಳು ಕೆಸರಿನಲ್ಲಿ ಸಿಲುಕಿ ಸಾವು!

ಕೆರೆಯಲ್ಲಿ ಈಜಲು ಹೋದ ಮೂರು ಮಕ್ಕಳು ಕೆಸರಿನಲ್ಲಿ ಸಿಲುಕಿ ಸಾವು!

ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ.

ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಬಾಲಕರು ಮೃತಪಟ್ಟಿದ್ದಾರೆ.

ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments