ದೀಪಾವಳಿ ಹಬ್ಬದ ಪ್ರಯುಕ್ತ ಹಬ್ಬಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.
ರಂಜಿತ್ (27) ರಮ್ಯಾ (24) ಮತ್ತು ಅಭಿಷೇಕ್ (21) ಮೃತಪಟ್ಟ ದುರ್ದೈವಿಗಳು.
ಚಿಕ್ಕಬಳ್ಳಾಪುರದ ಕಂಬತ್ತನಹಳ್ಳಿ ಗ್ರಾಮದ ಗೋಕುಂಟೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪರೇಸೇಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೀಪಾವಳಿ ಹಬ್ಬದ ಊಟಕ್ಕೆ ಸಂಬಂಧಿಕರು ಊಟಕ್ಕೆ ಸೇರಿದ್ದರು. ಊಟದ ನಂತರ ಗೋಕುಂಟೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.