Wednesday, October 23, 2024
Google search engine
Homeಜಿಲ್ಲಾ ಸುದ್ದಿಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಪಾಲು!

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಪಾಲು!

ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ.

ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾಥರ್ಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments