ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಖ್ಯಾತಿಯ ತುಳಸಿಗೌಡ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.
ಅಂಕೋಲಾ ಜಿಲ್ಲೆಯ ಹೊನ್ನಾಳ್ಳಿ ತಾಲೂಕಿನ ತುಳಸಿಗೌಡ ಲಕ್ಷಾಂತರ ಗಿಡಗಳನ್ನು ನೆಟ್ಟು ವೃಕ್ಷಮಾತೆ ಎಂದೇ ಖ್ಯಾತರಾಗಿದ್ದರು.
ಕಟ್ಟಿಗೆ ಸಂಗ್ರಹಿಸಿ ಜೀವನ ನಡೆಸುತ್ತಿದ್ದ ತುಳಸಿ ಗೌಡ ಮತ್ತಿಘಟ್ಟ ಅರಣ್ಯದಲ್ಲಿ ನರ್ಸರಿಯಲ್ಲಿ ಕೆಲಸದಲ್ಲಿ ನಿವೃತ್ತಿಯಾದರು. ನಿವೃತ್ತಿ ನಂತರವೂ ಯುವಕರಿಗೆ ತರಬೇತಿ ನೀಡುವ ಮೂಲಕ ಸಸಿಗಳನ್ನು ನೆಡುವ ಕಾರ್ಯದಲ್ಲಿ ೬ ದಶಕಗಳ ಕಾಲ ಯಾವುದೇ ಪ್ರತಿಫಲಾ ಅಪೇಕ್ಷೆ ಇಲ್ಲದೇ ಸೇವೆ ಸಲ್ಲಿಸಿದ್ದರು.
86ವರ್ಷದ ಹಾಲಕ್ಕಿ ಸಮುದಾಯದ ತುಳಸಿಗೌಡ ಅವರಿಗೆ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.