Wednesday, November 6, 2024
Google search engine
Homeಜಿಲ್ಲಾ ಸುದ್ದಿತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲಕ್ಷ್ಮೀ ಹೆಬ್ಬಾಳಕ್ಕರ್ ಪಿಎ, ತಹಸೀಲ್ದಾರ್...

ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲಕ್ಷ್ಮೀ ಹೆಬ್ಬಾಳಕ್ಕರ್ ಪಿಎ, ತಹಸೀಲ್ದಾರ್ ಕಾರಣ?

ವರ್ಗಾವಣೆಯಿಂದ ಬೇಸತ್ತು ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಲಭಿಸಿದೆ.

ಎಸ್ ಡಿಎ ರುದ್ರಣ್ಣ ಅವರನ್ನು ಸವದತ್ತಿ ಯಲ್ಲಮ್ಮ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಅಸಮಾಧಾನಗೊಂಡಿದ್ದ ರುದ್ರಣ್ಣ ವರ್ಗಾವಣೆ ರದ್ದುಗೊಳಿಸುವಂತೆ ಮಾಡಿದ ಮನವಿ ವಿಫಲವಾದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಬಸವರಾಜ್ ನಗರಲ್ ಕಚೇರಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ರುದ್ರಣ್ಣ ಅವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯ ಹಾಗೂ ಮೊಬೈಲ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದೇ ವೇಳೆ ರುದ್ರಣ್ಣ ವಾಟ್ಸಪ್ ಗ್ರೂಪ್ ನಲ್ಲಿ ನಮ್ಮ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ ಎಂದು ವಾಟ್ಸಪ್ ಮಾಡಿದ್ದು, ಈ ಪೋಸ್ಟ್ ಇದೀಗ ಡಿಲಿಟ್ ಆಗಿದೆ. ನನ್ನ ಸಾವಿಗೆ ತಹಸೀಲ್ದಾರ್ ಬಸವರಾಜ್ ನಗರಲ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಕಾರಣ ಎಂದು ವಾಟ್ಸಪ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದೇವೆ. ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments