Sunday, June 16, 2024
Google search engine
Homeಅಪರಾಧಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಪೊಲೀಸ್ ವಶಕ್ಕೆ

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಪೊಲೀಸ್ ವಶಕ್ಕೆ

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತ ಸೇರಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಮುಖಂಡ ಪ್ರೀತಂ ಗೌಡ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತ ಚೇತನ್ ಹಾಗೂ ಪ್ರೀತಂ ಗೌಡ ಅವರ ಆಪ್ತ ಲಿಖಿತ್ ಅವರನ್ನು ಹಾಸನ ಕ್ರೈಂ ಬ್ರಾಂಚ್ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳ ಮಹಜರು ನಂತರ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಲಿಖಿತ್ ಪ್ರೀತಂಗೌಡ ಅವರ ಆಪ್ತನಾಗಿದ್ದು, ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರೆ, ಚೇತನ್ ಯಲಗೂಂಡ ಗ್ರಾಮದ ನಿವಾಸಿಯಾಗಿದ್ದು, ಪ್ರೀತಂ ಗೌಡ ಅವರ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಕೆಲವು ದಿನಗಳ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಇದರಿಂದ ಪೆನ್ ಡ್ರೈವ್ ಸೋರಿಕೆ ಆಗಲಿದೆ ಎಂಬುದು ಇವರಿಗೆ ಮೊದಲೇ ತಿಳಿದಿತ್ತು ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments