Monday, July 22, 2024
Google search engine
Homeಜಿಲ್ಲಾ ಸುದ್ದಿಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು

ಓವರ್ ಟೇಕ್ ಮಾಡುವ ಆತುರದಲ್ಲಿ ಫಾರ್ಚುನರ್ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.

ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಬೆಂಗಳೂರಿನಲ್ಲಿ ಓದುತ್ತಿದ್ದ ಆಂಧ್ರಪ್ರದೇಶ ಮೂಲದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments