ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾಪವನ್ನು ಅಂಗೀಕರಿಸಿತು.
ಮಾಜಿ ರಾಷ್ಟ್ರಪತಿ ರಾಮನಾಥನ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ಶಿಫಾರಸುಗಳನ್ನು ಅಂಗೀಕರಿಸಿದ್ದ ಕೇಂದ್ರ ಸರ್ಕಾರ ಇದೀಗ ಒಂದು ದೇಶ, ಒಂದು ಚುನಾವಣೆ ಮಸೂದೆ ಜಾರಿಗೆ ತರಲು ಮೊದಲ ಹೆಜ್ಜೆ ಇಟ್ಟಿದೆ.
ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲ ಪ್ರಮುಖ ವಿಷಯವಾಗಿದ್ದ ಒಂದು ದೇಶ, ಒಂದು ಚುನಾವಣೆ ಜಾರಿಗೆ ತರಲು ಪ್ರಧಾನಿ ಮೋದಿ ಉತ್ಸುಕರಾಗಿದ್ದು, ೨೦೨೮ರ ಸಾರ್ವತ್ರಿಕ ಚುನಾವಣೆ ವೇಳೆ ಜಾರಿಗೆ ತರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಒಂದು ದೇಶ, ಒಂದು ಚುನಾವಣೆಗೆ ಪ್ರತಿಪಕ್ಷಗಳಲ್ಲಿ ಪ್ರಮುಖರಾದ ಕಾಂಗ್ರೆಸ್, ಎನ್ ಸಿಪಿ, ಡಿಎಂಕೆ, ತೃಣಮೂಲ ಕಾಂಗ್ರೆಸ್ ವಿರೋಧಿಸಿದ್ದವು. ಆದರೆ ಬಿಜೆಪಿ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಈ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯುವ ವಿಶ್ವಾಸದಲ್ಲಿದೆ.