Home ಜಿಲ್ಲಾ ಸುದ್ದಿ ನೆಲಮಂಗಲದಿಂದ ತುಮಕೂರಿಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

ನೆಲಮಂಗಲದಿಂದ ತುಮಕೂರಿಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

by Editor
0 comments
somanna

ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ-ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದ್ದಾರೆ.

ತುಮಕೂರಿನ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರೈಲ್ವೇ ನಿಲ್ದಾಣ ಪರಿವೀಕ್ಷಣೆ ಹಾಗೂ ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ  ರೈಲ್ವೇ ಕಾಮಗಾರಿಗಳಲ್ಲದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೂ  ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಹೆಚ್ಚು ಪ್ರಯಾಣಿಕರು ಸಂಚರಿಸುವುದರಿಂದ ಎಕ್ಸ್ ಪ್ರೆಸ್ ರೈಲುಗಳನ್ನೂ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸ್ ಪ್ರೆಸ್  ರೈಲು ಸಂಖ್ಯೆ 16240/16239 ಅನ್ನು ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ನಿಲುಗಡೆಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

banner

ಹೆಚ್ಚುವರಿ ನಿಲುಗಡೆಯು ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆಯಲ್ಲದೆ ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ರೈಲ್ವೇ ನಿಲುಗಡೆ ಸಮಯದ ವಿವರ

ನವೆಂಬರ್ 15ರಿಂದ 2025ರ ಫೆಬ್ರವರಿ 15ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್ ಪ್ರೆಸ್ ಸಂಜೆ 5:04ಗಂಟೆಗೆ ಸಂಪಿಗೆ ರೋಡ್ ನಿಲ್ದಾಣವನ್ನು ತಲುಪಿ ಸಂಜೆ 5:05ಗಂಟೆಗೆ ಹೊರಡಲಿದೆ. ನಂತರ ನವೆಂಬರ್ 16 ರಿಂದ ಫೆಬ್ರವರಿ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್ ಪ್ರೆಸ್ ಬೆಳಿಗ್ಗೆ 11:13ಗಂಟೆಗೆ ಸಂಪಿಗೆ ರೋಡ್ ನಿಲ್ದಾಣವನ್ನು ತಲುಪಿ ಬೆಳಿಗ್ಗೆ 11:14ಗಂಟೆಗೆ ಹೊರಡಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲ ಜಯರಾಮ, ಬೆಂಗಳೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೇಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ. ಅನೂಪ್ ದಯಾನಂದ ಸಾಧು, ಕಾರ್ಯಕ್ರಮದ ವ್ಯವಸ್ಥಾಪಕ ಹೆಚ್. ಎನ್. ಶ್ರೀನಿವಾಸ್ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ