Wednesday, October 16, 2024
Google search engine
Homeಅಪರಾಧಸರ್ಕಾರಕ್ಕೆ ವಂಚಿಸಿದ ಉತ್ತರ ಕನ್ನಡದ ಬಿಜೆಪಿ ನಾಯಕಿಗೆ 1 ವರ್ಷ ಜೈಲು ಶಿಕ್ಷೆ!

ಸರ್ಕಾರಕ್ಕೆ ವಂಚಿಸಿದ ಉತ್ತರ ಕನ್ನಡದ ಬಿಜೆಪಿ ನಾಯಕಿಗೆ 1 ವರ್ಷ ಜೈಲು ಶಿಕ್ಷೆ!

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.

ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರೂ ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿ ಸರ್ಕಾರದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಷಾ ಹೆಗಡೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ಸೋಮವಾರ ತೀರ್ಪು ಪ್ರಕಟಿಸಿದರು.

ಜಿ.ಪಂ.ಸದಸ್ಯರಾಗಿ ಅಧಿಕಾರದಲ್ಲಿದ್ದಾಗ 2011 ಜನವರಿಯಿಂದ 2012 ನವೆಂಬರ್ ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಜನಪ್ರತಿನಿಧಿಯಾದ ನಂತರವೂ ಅಂಗನವಾಡಿ ದಾಖಲೆ ತೋರಿಸಿ ಸರ್ಕಾರದಿಂದ ಗೌರವಧನ 88,630 ರೂ. ಪಡೆದು ವಂಚಿಸಿದ್ದರು.

ಜಿಲ್ಲಾ ಪಂಚಾಯತ್ ಬದನಗೋಡ ಕ್ಷೇತ್ರದ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೇ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಾಗದೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ ಸುಳ್ಳು ಸಹಿ ಮಾಡಿದ್ದಾರೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಇಬ್ರಾಹಿಂ ನಬಿಸಾಬ್ ನೀಡಿದ ದೂರು ಆಧರಿಸಿ ಲೋಕಾಯುಕ್ತ ಪರ ಕಾರವಾರದ ಎಲ್.ಎಂ.ಪ್ರಭು ವಾದಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಹುದ್ದೆ ಮಾಡಲು ಬರುವುದಿಲ್ಲ. ಸರ್ಕಾರದ ಆದೇಶದಂತೆ ಒಂದು ಹುದ್ದೆಗೆ ರಾಜೀನಾಮೆ ನೀಡಿ ಎಂದು ಮೌಖಿಕವಾಗಿ ಹಾಗೂ ಲಿಖಿತವಾಗಿ ಸೂಚಿಸಲಾಗಿತ್ತು. ಆದರೂ ಉಷಾ ಹೆಗಡೆ ಇಲಾಖೆಯ ಆದೇಶ ಹಾಗೂ ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ನೀಡಿದ ಆದೇಶವನ್ನು ಧಿಕ್ಕರಿಸಿದ್ದರು. ಈ ಅಂಶಗಳನ್ನು ಜಿಲ್ಲಾ ಪ್ರಧಾನ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments