Monday, July 22, 2024
Google search engine
Homeತಾಜಾ ಸುದ್ದಿದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿ.ಸೋಮಣ್ಣ

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿ.ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಮೋದಿ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿ. ಸೋಮಣ್ಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಹಾನಗರ ಪಾಲಿಕೆ ಸದಸ್ಯರಾಗಿ, ಮಾಜಿ ಸಚಿವರಾಗಿ ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ವಿ.ಸೋಮಣ್ಣ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೈಕಮಾಂಡ್ ಒತ್ತಾಯದಿಂದ ತಮ್ಮ ಗೋವಿಂದನಗರ ಕ್ಷೇತ್ರವನ್ನು ಬಿಟ್ಟು ಎರಡು ಕ್ಷೇತ್ರಗಳಲ್ಲಿ ನಿಂತು ಸೋಲುಂಡಿದ್ದರು.

ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿ.ಸೋಮಣ್ಣ ಕಾಂಗ್ರೆಸ್ ನ ಮುದ್ದೆಹನುಮೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ 17 ಮತ್ತು ಮೈತ್ರಿ ಪಕ್ಷವಾದ ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 9 ಸ್ಥಾನದಲ್ಲಿ ಗೆಲುವು ಕಂಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments